ಅಕ್ಷಿತಾ ನೀರ್ಪಾಡಿ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಉತ್ತೀರ್ಣ

0

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಸೀನಿಯರ್ ಪರೀಕ್ಷೆಯಲ್ಲಿ ಕು. ಅಕ್ಷಿತಾ ನೀರ್ಪಾಡಿಯವರು 600ಕ್ಕೆ 533 (88.83% ) ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ.

ಈಕೆ ಗಾನ ನೃತ್ಯ ಅಕಾಡೆಮಿಯ ಗುರು ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಹಾಗೂ ಮಂಜುಶ್ರೀ ರಾಘವ ಇವರ ಶಿಷ್ಯೆಯಾಗಿದ್ದು ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ನಲ್ಲಿ ತೃತೀಯ ವರ್ಷದ ಬಿಎಸ್ಸಿ ಎಂಎಲ್‌ಟಿ ವ್ಯಾಸಂಗ ಮಾಡುತ್ತಿದ್ದಾಳೆ.

ಮಂಡೆಕೋಲು ಗ್ರಾಮದ ಪೇರಾಲಿನ ಯೋಗೀಶ್ ನೀರ್ಪಾಡಿ ಹಾಗೂ ಭಾರತಿ ದಂಪತಿಗಳ ಪುತ್ರಿ.