ಪಂಜ: ಯಕ್ಷಗಾನ ಕಲಾ ಕೇಂದ್ರಕ್ಕೆ ಪರಮೇಶ್ವರ ಬಿಳಿಮಲೆ ಮತ್ತು ಮನೆಯವರಿಂದ ದೇಣಿಗೆ

0

ಶ್ರೀ ಶಾರದಾಂಬಾ ಯಕ್ಷಗಾನ ಕಲಾ ಕೇಂದ್ರಕ್ಕೆ ವಿದ್ಯುತ್ ಸಂಪರ್ಕಕ್ಕೆ ಶ್ರೀ ಶಾರದಾಂಬಾ ಭಜನಾ ಮಂಡಳಿಯ ಉಪಾಧ್ಯಕ್ಷ ಪರಮೇಶ್ವರ ಬಿಳಿಮಲೆ ಮತ್ತು ಅವರ ಮನೆಯವರು ರೂ.30000 ದೇಣಿಗೆ ನೀಡಿದ್ದು ಜ.5 ರಂದು ಪರಮೇಶ್ವರ ಬಿಳಿಮಲೆ ಅವರು ಚಾಲನೆ ನೀಡಿ ಶುಭ ಹಾರೈಸಿದರು.


ಯಕ್ಷಗಾನ ಟ್ರಸ್ಟ್ ನ ಉಪಾಧ್ಯಕ್ಷ ತಿಮ್ಮಪ್ಪ ಗೌಡ ಕೂತ್ಕುಂಜ ಸಭಾಧ್ಯಕ್ಷತೆ ವಹಿಸಿದ್ದರು.ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ , ಯಕ್ಷಗಾನ ಕಲಾ ಕೇಂದ್ರದ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.ಇದೇ ವೇಳೆ ಪರಮೇಶ್ವರ ಬಿಳಿಮಲೆ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಬಾಲಕೃಷ್ಣ ಪುತ್ಯ ಸ್ವಾಗತಿಸಿದರು. ಯಕ್ಷಗಾನ ನಾಟ್ಯ ಗುರು ಗಿರೀಶ್ ಗಡಿಕಲ್ಲು ವಂದಿಸಿದರು.