ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾದ ಸಂಸದ
ಎಡಮಂಗಲ ಗ್ರಾಮದ ಮುರುಳ್ಯ ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ನಡೆಯುತ್ತಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ ಜ.5ರಂದು ಭೇಟಿ ನೀಡಿದರು. ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಇನ್ನಿತರರು ಉಪಸ್ಥಿತರಿದ್ದರು.