ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿ ಮಹೋತ್ಸವದ ಪ್ರಯುಕ್ತ ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ ಜ.5 ರಾತ್ರಿ ಜರುಗಿತು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಕಿರುಷಷ್ಠಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು ಶ್ರೀ ದೇವರಿಗೆ ಪೂಜೆ ನೆರವೇರಿಸಿದರು.ಬಳಿಕ ವೈಭವದ ರಥೋತ್ಸವ ನೆರವೇರಿತು.
ನಂತರ ಶ್ರೀ ದೇವಳದ ರಥಬೀದಿಯಿಂದ ಕಾಶಿಕಟ್ಟೆ ತನಕ ಶ್ರದ್ಧಾ ಭಕ್ತಿಯಿಂದ ರಥೋತ್ಸವ ನೆರವೇರಿತು. ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನೆರವೇರಿತು.ಈ ಸಂದರ್ಭದಲ್ಲಿ ಆಕರ್ಷಕ ಸುಡುಮದ್ದುಗಳು ಬಾನಂಗಳದಲ್ಲಿ ಬಣ್ಣದ ಚಿತ್ತಾರ ಮೂಡಿಸಿತು. ಬಳಿಕ ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.
ಕಿರುಷಷ್ಠಿ ಉತ್ಸವದ ಸಂದರ್ಭ ಶ್ರೀ ದೇವರಿಗೆ ಅವಳಿ ಉತ್ಸವ ನಡೆಯುವುದು ವಿಶೇಷ. ಆರಂಭದಲ್ಲಿ ಕಿರುಷಷ್ಠಿ ರಥೋತ್ಸವದ ಬಳಿಕ ವಿವಿಧ ಸಂಗೀತ ಸುತ್ತುಗಳು ನೆರವೇರಿತು. ಬಳಿಕ ಮಾಮೂಲಿನಂತೆ ಶ್ರೀ ದೇವರ ರಾತ್ರಿ ಮಹಾಪೂಜೆ ನಡೆದು ನಂತರ ಪ್ರತಿನಿತ್ಯದಂತೆ ಶ್ರೀ ದೇವರ ಬಂಡಿ ಮತ್ತು ಪಾಲಕಿ ಉತ್ಸವ ಮತ್ತು ಸಂಗೀತ ಸುತ್ತುಗಳು ನೆರವೇರಿತು.ಅಲ್ಲದೆ ಒಳಾಂಗಣದಲ್ಲಿ ಶ್ರೀ ದೇವರಿಗೆ ಮಂಟಪ ಪೂಜೆ ನಡೆಯಿತು.
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಪವನ್ ಎಂ.ಡಿ, ಅಚ್ಚುತ್ತ ಗೌಡ ಬಳ್ಪ, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ಅಭಿಯಂತರ ಉದಯಕುಮಾರ್, ಹೆಬ್ಬಾರ್ ಪ್ರಸನ್ನ ಭಟ್, ಪಾಟಾಳಿ ಲೋಕೇಶ್ ಎ.ಆರ್ ಸೇರಿದಂತೆ ದೇವಳದ ಸಿಬ್ಬಂಧಿಗಳು, ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.
.ಪೋಟೋ: ಶಾಂತಲ ಸ್ಟುಡಿಯೋ ಸುಬ್ರಹ್ಮಣ್ಯ