ಕೇರ್ಪಡ ಮಹಿಷಮರ್ದಿನಿ ದೇವಸ್ಥಾನ- ಬ್ರಹ್ಮಕಲಶೋತ್ಸವ

0

ದೇವರಿಗೆ ಅಷ್ಟಬಂಧ ಕ್ರಿಯೆ ಬ್ರಹ್ಮಕಲಶಾಭಿಷೇಕ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು,
ಇಂದು ಬೆಳಗ್ಗೆ ಮಹಾಗಣಪತಿ ಹೋಮ, ಚಂಡಿಕಾ ಹೋಮ ನಡೆಯಿತು.ಬೆಳಗ್ಗೆ 8.23ರಿಂದ 9.23ರವರೆಗೆ ನಡೆಯುವ ಮಕರ ಲಗ್ನ ಶುಭಮುಹೂರ್ತದಲ್ಲಿ ಶ್ರೀ ಮಹಿಷಮರ್ದಿನೀ ದೇವರಿಗೆ ಅಷ್ಟಬಂಧ ಕ್ರಿಯೆ ಬ್ರಹ್ಮಕಲಶಾಭಿಷೇಕ ನಡೆಯಿತು.


ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಬಳಿಕ ವಿವಿದ ವೈಧಿಕ ಕಾರ್ಯಗಳು ನಡೆಯಿತು. ಸಂಜೆ ದೇವರಿಗೆ ದೊಡ್ಡ ರಂಗ ಪೂಜೆ , ರಾತ್ರಿ ಶ್ರೀ ದೇವರ ಬಲಿ ಹೊರಟು, ಶ್ರೀ ಭೂತಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಬೆಡಿ ಪ್ರದರ್ಶನ ನಡೆಯಲಿದೆ.