ಸುಳ್ಯದ ಶ್ರೀ ಶಾರದಾಂಬ ಸೇವಾ ಸಮಿತಿಯಲ್ಲಿ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ ಗೌರವಾಧ್ಯಕ್ಷರಾಗಿ ದುಡಿದು, ಅತ್ಯುತ್ತಮ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಕುಲ್ ದಾಸ್ ರಿಗೆ ಸನ್ಮಾನ ಕಾರ್ಯಕ್ರಮ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ಸುಳ್ಯ ಶಾಖೆಯ ಸಿಬ್ಬಂದಿಗಳು ಹಾಗೂ ಗ್ರಾಹಕರ ಪರವಾಗಿ ಜ. 6ರಂದು ಆದರ್ಶ ವಿ.ಸ.ಸಂಘದ ಸುಳ್ಯ ಶಾಖಾ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸುಳ್ಯ ಆದರ್ಶ ಸಹಕಾರ ಸಂಘದ ನಿವೃತ್ತ ವ್ಯವಸ್ಥಾಪಕ ರಾಧಾಕೃಷ್ಣ ಸಿ, ವ್ಯವಸ್ಥಾಪಕರಾದ ಮನೋಜ್ ಕುಮಾರ್, ಸಿಬ್ಬಂದಿಗಳಾದ ಶ್ರೀದೇವಿ, ಕಾರ್ತಿಕ್ ಹಾಗೂ ಪ್ರಿಯಾ ಉಪಸ್ಥಿತರಿದ್ದರು.