ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ ನವೋದಯ/ ಸೈನಿಕ ಪರೀಕ್ಷೆಗಳಿಗೆ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

0

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯಲ್ಲಿ 2024-25ನೇ ಸಾಲಿನ ನವೋದಯ ಮತ್ತು ಸೈನಿಕ ಶಾಲಾ ಪರೀಕ್ಷೆಗಳಿಗೆ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಮೂಹ ಸಂಪನ್ಮೂಲ ಅಧಿಕಾರಿ ಮಮತಾ ರವೀಶ್ ಪಡ್ಡಂಬೈಲುರವರು ವಿದ್ಯಾಮಾತಾ ಸಂಸ್ಥೆಯ ವಿವಿಧ ತರಬೇತಿ ಯೋಜನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದರು ಅಲ್ಲದೆ “ಸುಳ್ಯ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಕೊರತೆಯನ್ನು ವಿದ್ಯಾಮಾತಾ ಅಕಾಡೆಮಿಯು ನೀಗಿಸಿದೆ” ಎಂದರು.

ತರಬೇತಿ ಪಡೆದ ಎಲ್ಲ ವಿದ್ಯಾರ್ಥಿಗಳಿಗೆ ಪದಕ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ವಿದ್ಯಾಮಾತಾ ಅಕಾಡೆಮಿ ಅತ್ಯುತ್ತಮ ತರಬೇತಿಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸ್ಥೆಯ ಗೌರವ ತರಬೇತುದಾರರಾದ ಶ್ರೀಮತಿ ಕವಿತಾರವರಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಪ್ರಾಸ್ತಾವಿಕ ನೆಲೆಯಲ್ಲಿ ಮಾತನಾಡಿದರು.

ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆಯ ಸಾರ್ವಜನಿಕ ಸಂಪನ್ಮೂಲ ಅಧಿಕಾರಿ ಶ್ರೀಮತಿ ಚಂದ್ರವತಿ ಬಡ್ಡಡ್ಕ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕಿ ರಮ್ಯಾ ಭಾಗ್ಯೇಶ್ ರೈ ರವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳೇ ನಿರ್ವಹಿಸಿ ನಿರೂಪಿಸಿದ್ದು ವಿಶೇಷವಾಗಿತ್ತು. ಸಿಬ್ಬಂದಿಗಳಾದ ಉಷಾ, ಯಶಸ್ವಿನಿ, ಮಿಥುನ್ ರವರು ಸಹಕರಿಸಿದರು.