ವಿದ್ಯಾರ್ಥಿಗಳ ಪ್ರತಿಭೆ ಹೊರಹೊಮ್ಮಲು ಅವಕಾಶವಾಗಿದೆ – ಪರಮೇಶ್ವರಯ್ಯ ಕಾಂಚೋಡು
ಮೂಲಸೌಕರ್ಯಗಳಿಗೆ ಒತ್ತು ಕೊಡುವ ಮುಖಾಂತರ ಕನ್ನಡ ಮಾಧ್ಯಮ ಶಾಲೆಯ ಅಭಿವೃದ್ಧಿ – ಕೂಸಪ್ಪ ಗೌಡ
ಇಂದ್ರಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ,ಹಿರಿಯ ವಿದ್ಯಾರ್ಥಿ ಸಂಘ ಇಂದ್ರಾಜೆ ವತಿಯಿಂದ ಶಾಲಾ ವಾರ್ಷಿಕೋತ್ಸವವು ಜ.06 ರಂದು ನಡೆಯಿತು.
ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಪರಮೇಶ್ವರಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ಪುಟ್ಟ ಊರಿನಲ್ಲಿ ಎಲ್ಲರ ಸಹಕಾರ ಅವಿರತ ಶ್ರಮದಿಂದ ವಾರ್ಷಿಕೋತ್ಸವ ನಡೆಯುತ್ತಿದೆ.
ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಲು ವೇದಿಕೆ ಕಲ್ಪಿಸಿದಂತಾಗಿದೆ.ಮುಂದೆ ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳುವಲ್ಲಿ ಇದು ದಾರಿದೀಪವಾಗಲಿ ಎಂದು ಹೇಳಿದರು.ದೇವಸ್ಥಾನದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ಹೇಳಿದರು.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಶಿವರಾಮ ಕೆ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುವರ್ಣ ಚಂದ್ರಿಕಾರವರು ಶಾಲಾ ವಾರ್ಷಿಕ ವರದಿ ಮಂಡಿಸಿದರು.
ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಬಳಿಕ ವಿದ್ಯಾರ್ಥಿಗಳಿಗೆ ದತ್ತಿ ನಿಧಿಯನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪಾವನ ಜೋಗಿಬೆಟ್ಟು,ಗ್ರಾಮ ಪಂಚಾಯತ್ ಸದಸ್ಯ ಹರ್ಷ ಜೆ.ಜೋಗಿಬೆಟ್ಟು,ಎಣ್ಮೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಸರೋಜಿನಿ,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಪಿ.ಶೇಖರ್ ಉಪಸ್ಥಿತರಿದ್ದರು.
ಶಾಲಾ ಸಹಶಿಕ್ಷಕಿ ಮಧುಶ್ರೀ ಸ್ವಾಗತಿಸಿ,ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಮೊದಲು ಮತ್ತು ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಜೃತಿಕ ಕಾರ್ಯಕ್ರಮಗಳು ನಡೆದವು. ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ಮನರಂಜಿಸಿತು.