ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ರವರಿಗೆ ಸನ್ಮಾನ
ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಜ.4 ರಂದು ಪಂಜದಲ್ಲಿ ನಡೆದ ಸೂರ್ಯ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದ ಮಧ್ಯೆ ಸಮಾಜ ಸೇವಕ,ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ರವರನ್ನು ಸನ್ಮಾನಿಸಲಾಯಿತು.
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಲಗೋರಿ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ರವರು ಸನ್ಮಾನಿಸಿದರು.
ಪಂಚಶ್ರೀ ಪಂಜ ಸ್ಪೋರ್ಟ್ಸ್ ಅಧ್ಯಕ್ಷ ಹಿತೇಶ್ ಪಂಜದಬೈಲು, ನಿಕಟಪೂರ್ವಾದ್ಯಕ್ಫ ಪವನ್ ಪಲ್ಲತ್ತಡ್ಕ , ಕ್ಲಬ್ ನ ಸರ್ವ ಸದಸ್ಯರು, ಅತಿಥಿಗಳು ಉಪಸ್ಥಿತರಿದ್ದರು. ಕಬಡ್ಡಿ ಪಂದ್ಯಾಟದ ವೀಕ್ಷಕ ವಿವರಣೆ ನೀಡುತ್ತಿದ ವಿಜಯ್ ಅತ್ತಾಜೆ ಸ್ವಾಗತಿಸಿದರು ಮತ್ತು ವಂದಿಸಿದರು.