ಜ. 8: ಮುಪ್ಪೇರ್ಯ ಶ್ರೀ ಧರ್ಮಶಾಸ್ತಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಇರುಮುಡಿ ಕಟ್ಟುವ ಕಾರ್ಯಕ್ರಮ

0

ಬಾಳಿಲ ಗ್ರಾ.ಪಂ. ವ್ಯಾಪ್ತಿಯ ಮುಪ್ಪೇರ್ಯ ಗ್ರಾಮದ ಕಲ್ಕಲದಲ್ಲಿರುವ ಶ್ರೀ ಧರ್ಮಶಾಸ್ತಾ ಸೇವಾ ಟ್ರಸ್ಟ್ ಆಶ್ರಯದಲ್ಲಿರುವ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಅಯ್ಯಪ್ಪ ಮಾಲಾಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ ಇಂದು (ಜ. 8ರಂದು) ನಡೆಯಲಿದೆ.
ಬೆಳಿಗ್ಗೆ ಗಣಪತಿ ಹೋಮ ನಡೆಯಿತು. ಬಳಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಶಬರಿಮಲೆ ಯಾತ್ರೆ ಮಾಡಲಿರುವ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಇರುಮುಡಿ ಕಟ್ಟುವ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆಯ ಬಳಿಕ ಪ್ರಸಾದ ಭೋಜನ ನಡೆಯಲಿದೆ.