ಸಂಘದ ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಅವಿರೋಧ ಆಯ್ಕೆ
ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಮಕೃಷ್ಣ ಭಟ್ ಕುರುಂಬುಡೇಲು ಮತ್ತು ಉಪಾಧ್ಯಕ್ಷರಾಗಿ ಪದ್ಮನಾಭ ಶೆಟ್ಟಿ ಪೆರುವಾಜೆ ಅವಿರೋಧವಾಗಿ ಆಯ್ಜೆಯಾಗಿದ್ಸಾರೆ.
ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ 11 ಮಂದಿ ಅಭ್ಯರ್ಥಿಗಳು ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿದ್ದರು.
ಇಂದು ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಜೆಯ ಸಂದರ್ಭದಲ್ಲಿ ರಾಮಕೃಷ್ಣ ಭಟ್ ಕುರುಂಬುಡೇಲು ಅಧ್ಯಕ್ಷತೆಗೆ ಮತ್ತು ಪದ್ಮನಾಭ ಶೆಟ್ಟಿ ಪೆರುವಾಜೆ ಉಪಾಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದ್ದರು.
ಇಬ್ಬರೂ ಅವಿರೋಧವಾಗಿ ಆಯ್ಕೆಯಾದರು.
ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಚುನಾವಣಾಧಿಕಾರಿಯಾಗಿದ್ದರು
ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುನಂದ ಆಳ್ವ ಸಹಕರಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ
ನಿರ್ದೇಶಕರಾಗಿ ಐತ್ತಪ್ಪ ರೈ ಅಜ್ರಂಗಳ, ನಾರಾಯಣ ಕೊಂಡೆಪ್ಪಾಡಿ,ಜನಾರ್ದನ ಆರ್ವಾರ,ವಾಸುದೇವ ನಸಯಕ್,ಭಾಸ್ಕರ ಗೌಡ ನೆಟ್ಟಾರು, ಭಾರತಿ ಕೊಚ್ಚಿ,ವನಿತಾ ಸಾರಕರೆ,ಸುಂದರ ನಾಗನಮಜಲು , ಬಿಯಾಳು ಬೇರ್ಯ,ಕರುಣಾಕ ಆಳ್ವ ,ಸಂಘದ ಮಾಜಿ ಅಧ್ಯಕ್ಷ ಶ್ರೀರಾಮ ಪಾಟಾಜೆ, ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ರತನ್ ,ಬಿಜೆಪಿ ಪಕ್ಷದ ಕಾರ್ಯಕರ್ತರು,ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.