ದೇವಚಳ್ಳ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0

ಸಂಭ್ರಮದ ಇತಿಹಾಸದ ಹಿಂದಿನ ಕಾರಣಕರ್ತರ ನೆನಪು ಅಗತ್ಯ : ಡಾ. ಲೀಲಾಧರ್

ವಿದ್ಯೆ, ಸಂಸ್ಕಾರ, ಸಂಸ್ಕೃತಿ ಕೊಟ್ಟ ಶಾಲೆಯ ಶತಮಾನೋತ್ಸವ ಮಹತ್ವದ ಘಟ್ಟ : ಡಾ. ಉಜ್ವಲ್

ವಿದ್ಯೆ, ಸಂಸ್ಕಾರ, ಸಂಸ್ಕೃತಿ ಕೊಡುವಲ್ಲಿ ದೇವಚಳ್ಳ ಶಾಲೆ ಯಶಸ್ವಿಯಾಗಿದೆ. ಹೀಗಾಗಿ ನೂರು ವರ್ಷ ಪೂರೈಸಿದ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದೆ. ಹಿರಿಯ ವಿದ್ಯಾರ್ಥಿಗಳ ಪೂರಕ ಚಟುವಟಿಕೆಗಳ ಮೂಲಕ ಶಾಲೆ ಬೆಳೆಯಬೇಕು. ಶಾಲೆಯೊಂದಿಗಿನ ಸಂಬಂಧ ಬೆಳೆಸುವ ಕಾರ್ಯ ಎಲ್ಲರಿಂದ ಆಗಬೇಕು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ ಟೀಮ್ ನ ವಿದ್ಯಾ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ಹೇಳಿದರು.

ಅವರು ಇಂದು ದೇವಚಳ್ಳ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ಕೆವಿಜಿ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ದೀಪ ಬೆಳಗಿಸಿದರು. ಶತ ಸಂಭ್ರಮ ಎದುರು ನೋಡುತ್ತಿರುವ ಶಾಲೆಯ ಈ ಪಥದಲ್ಲಿ ಸಹಕರಿಸಿದ ಎಲ್ಲರನ್ನೂ ನೆನಪಿಸಿಕೊಳ್ಳುವ ಕಾರ್ಯ ಆಗಬೇಕು . ಎಲ್ಲರ ಸಹಭಾಗಿತ್ವದಲ್ಲಿ ಮಾದರಿಯಾಗಿ ಈ ಶತ ಸಂಭ್ರಮ ನಡೆಯಲಿ ಎಂದು ಅವರು ಹೇಳಿದರು.

ಜ. 24, 25 ರಂದು ಅದ್ಧೂರಿ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಹಲವು ದಾನಿಗಳು ಕೊಡುಗೆಗಳ ಮೂಲಕ ಸಹಕಾರ ನೀಡಿದ್ದಾರೆ ಎಂದು ಸಭಾಧ್ಯಕ್ಷತೆ ವಹಿಸಿದ್ದ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎ.ವಿ.ತೀರ್ಥರಾಮ ಹೇಳಿದರು.

ವೇದಿಕೆಯಲ್ಲಿ ಶಾಲಾ ಉದ್ಯಾನವನಕ್ಕೆ ಪ್ರಾಣಿಗಳ ಮೂರ್ತಿಗಳನ್ನು ಕೊಡುಗೆಯಾಗಿ ನೀಡಿದ ಸೀತಾರಾಮ ಹಲ್ದಡ್ಕ, ರಾಧಾಕೃಷ್ಣ ಕೆ..ಆರ್. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಜಯಾನಂದ ಪಟ್ಟೆ, ಒಡಿಯೂರು ಗ್ರಾಮ ವಿಕಾಸ ಯೋಜನೆಯ ಮೇಲ್ವಿಚಾರಕಿ ಗೀತಾ ಸಂಕಪ್ಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮೇಲ್ವಿಚಾರಕ ಬಾಲಕೃಷ್ಣ, ಎಲಿಮಲೆ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ಕುಮಾರ್, ಜ್ಞಾನದೀಪ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯರಾದ ಗದಾಧರ ಬಾಳುಗೋಡು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿ.ವಿ., ದೇವಚಳ್ಳ ಗ್ರಾ.ಪಂ. ಸದಸ್ಯೆ ಪ್ರೇಮಲತಾ ಕೇರ ಉಪಸ್ಥಿತರಿದ್ದರು.

ದೇವಚಳ್ಳ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಧರ ಗೌಡ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಯಂತ ತಳೂರು ಸ್ವಾಗತಿಸಿ, ಸಹ ಶಿಕ್ಷಕಿ ಹರಿಣಾಕ್ಷಿ ವಂದಿಸಿದರು. ಶ್ರೀಮತಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು.