ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆ ,ಸುಳ್ಯದ ಸ್ಪರ್ಧಿ ಶಶ್ಮಿ ಭಟ್ ಭಾಗಿ

0

ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025 ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಪಾಕ ಸ್ಪರ್ಧೆಯು ಬೆಂಗಳೂರಿನ ಸ್ಲರ್ಪ್ ಕ್ಯುಲಿನರಿ ಅಕಾಡೆಮಿಯಲ್ಲಿ ನಡೆಯುತ್ತಿದ್ದು ಜಿಲ್ಲಾ ಮಟ್ಟದಲ್ಲಿ ನಡೆದ ಸ್ಪರ್ಧೆಯಲ್ಲಿ ಪ್ರಥನ ಬಹುಮಾನ ಪಡೆದ ತಂಡಗಳನ್ನು ಮಂಗಳೂರು ಜಂಟಿ ಸಹಾಯಕ ಕೃಷಿ ನಿರ್ದೇಶಕ ಕಛೇರಿಯ ಧನಲಕ್ಷ್ಮೀ ಡಿ. ಎನ್ ಇವರ ನೇತೃತ್ವದಲ್ಲಿ ಬೆಂಗಳೂರಿನ ಸ್ಪರ್ಧೆಯಲ್ಲಿ ಭಾಗವಹಿಸಲಾಯಿತು.

ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಸಿಹಿಖಾದ್ಯ ವಿಭಾಗದಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಸ್ಪರ್ಧೆ ಗೆ ಆಯ್ಕೆಗೊಂಡಿದ್ದ ಶಶ್ಮಿ ಭಟ್ ಅಜ್ಜಾವರ ಇವರು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಈ ಸ್ಪರ್ಧೆಯ ಫಲಿತಾಂಶವು ಜನವರಿ 23 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವಿಜೇತ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಿದ್ದಾರೆ.