ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ಶಿಕ್ಷಕರುಗಳಿಗೆ ವಿಷಯವಾರು ತರಬೇತಿ ಮತ್ತು ಸಮಾಲೋಚನಾ ಶಿಬಿರ

0

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ಗಳ ಸಂಯುಕ್ತ ಆಶ್ರಯದಲ್ಲಿ
ಸುಳ್ಯಜಟ್ಟಿಪಳ್ಳ ನಾವೂರು ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ಸಭಾಂಗಣ ದಲ್ಲಿ ಪ್ರೌಢ ಶಾಲಾ ಶಿಕ್ಷಕರುಗಳಿಗೆ ಕೋರ್ ವಿಷಯಗಳ ಸಮಾಲೋಚನಾ ಮತ್ತು ತರಬೇತಿ ಶಿಬಿರ ಜರಗಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರೀನ್ ವ್ಯೂ ಸಂಸ್ಥೆ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ ಉದ್ಘಾಟಿಸಿದರು .
ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್ ಪ್ರಸ್ತಾವನೆ ಗೈದರು. ಮೀಫ್ ಒಕ್ಕೂಟ ದ. ಕ. ಮತ್ತು ಉಡುಪಿ ಜಿಲ್ಲೆಗಳ ಉಪಾಧ್ಯಕ್ಷ ಕೆ. ಎಂ. ಮುಸ್ತಫ ಶುಭಾಶಂಸನೆ ಮಾಡಿದರು.


ವೇದಿಕೆಯಲ್ಲಿ ಪ್ರೌಢ ಶಾಲಾ ಶಿಕ್ಷಕರ ಸಂಘ ದ ಅಧ್ಯಕ್ಷ ಚಂದ್ರಶೇಖರ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ಮಾಜಿ ಸಂಚಾಲಕ ಮುಹಿಯದ್ದೀ ನ್, ಶಿಕ್ಷಣ ಇಲಾಖೆಯ ಚಿನ್ನಪ್ಪ, ಪ್ರವೀಣ್ ಕುಮಾರಿ,ರಮ್ಯಾ ಸುಂದರ್ ಮೊದಲಾದವರು ಉಪಸ್ಥಿತರಿದ್ದರು, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಗಳ ಬಗ್ಗೆ ಶಿಕ್ಷಕರುಗಳಿಗೆ ತರಬೇತಿ ನೀಡಲಾಯಿತು, ಗ್ರೀನ್ ವ್ಯೂ ಮುಖ್ಯ ಶಿಕ್ಷಕ ಇಲ್ಯಾಸ್ ಸ್ವಾಗತಿಸಿ, ಹಿರಿಯ ಶಿಕ್ಷಕಿ ಜಯಂತಿ, ಶಿಕ್ಷಕರಾದ ಮಂಜುನಾಥ್ ಮತ್ತು ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.