ಹಿಂದೂ ಹಿತರಕ್ಷಣಾ ವೇದಿಕೆಯಿಂದ ಖಂಡನೆ
ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಶ್ರೀಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಹೆಚ್ಚುವರಿ ವಿದ್ಯುತ್ ಪಡೆದು ಕೊಳ್ಳುವ ಸಲುವಾಗಿ ಗುತ್ತಿಗೆದಾರ ಮಧುಕಿರಣ್ ರವರು ನೀಡಿದ ಅರ್ಜಿಯನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಿರುವ ಬಗ್ಗೆ ಪ್ರಶ್ನಿಸಲು ಹೋದ ಮಧುಕಿರಣ್ ರವರಿಗೆ ಮೆಸ್ಕಾಂಇಲಾಖೆಯ
ಅಭಿಯಂತರರು ಅವಾಚ್ಯ ಶಬ್ಧಗಳನ್ನು ಬಳಸಿ
ನಿಂದಿಸಿದ್ದಾರೆಂದು ಆರೋಪಿಸಲಾಗಿದೆ.
ಹೆಚ್ಚುವರಿ ವಿದ್ಯುತ್ ಸಂಪರ್ಕ ವಹಿಸಿಕೊಡುವ ವಿಚಾರವಾಗಿ
ದೇವಸ್ಥಾನದ ಆಡಳಿತ ಮಂಡಳಿಯವರ ಗಮನಕ್ಕೆ ತಾರದೆ ಅನ್ಯಮತಿಯ ಗುತ್ತಿಗೆದಾರರಿಗೆ ಮಂಜುರಾತಿ ಮಾಡಿರುವುದಾಗಿ ಆರೋಪಿಸಿ ಮೆಸ್ಕಾಂ ಇಲಾಖೆಯ ಅಭಿಯಂತರರಾದ ಸುಪ್ರೀತ್ ರವರ ಹಿಂದೂ ವಿರೋಧಿ ನಡೆಯನ್ನು
ಹಿಂದೂ ಹಿತ ರಕ್ಷಣಾ ವೇದಿಕೆ ಖಂಡಿಸುವುದಾಗಿಯೂ ಇಂತಹ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯವರು ಆಗ್ರಹಿಸಿದ್ದಾರೆ.