ಕರ್ನಾಟಕ ರಾಜ್ಯ ಡಾ. ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರು ಇವರು ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಕು. ಆಕಾಂಕ್ಷಾ ಕಜೆಗದ್ದೆ ಇವರು ಅತ್ಯುತ್ತಮ ಅಂಕಗಳನ್ನು ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈಕೆ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಗುರುಗಳಾದ ವಿದ್ವಾನ್ ದೀಪಕ್ ಕುಮಾರ್ ವಿದುಷಿ ಪ್ರೀತಿಕಲಾ ಹಾಗೂ ವಿದ್ವಾನ್ ಗಿರೀಶ್ ಕುಮಾರ್ ಇವರ ಶಿಷ್ಯೆಯಾಗಿದ್ದು ಪ್ರಸ್ತುತ ಪುತ್ತೂರಿನ ಸುದಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಳೆ.
ಈಕೆ ಕನಕಮಜಲಿನ ಗಣೇಶ ಕಜೆಗದ್ದೆ ಹಾಗೂ ಶ್ರೀಮತಿ ಹೇಮಲತಾ ಗಣೇಶ್ ಕಜೆಗದ್ದೆ ದಂಪತಿಯ ಪುತ್ರಿ.