ಜ.12ರಂದು ಸುಳ್ಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ

0

ಸ್ವಾಮಿ ವಿವೇಕಾನಂದ ಪ್ರತಿಮೆ ನಿರ್ಮಾಣ ಸಮಿತಿ ಸುಳ್ಯ ಇದರ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಜ.೧೨ರಂದು ಸುಳ್ಯದ ವಿವೇಕಾನಂದ ವೃತ್ತದ ವಠಾರದಲ್ಲಿ ಬೆಳಗ್ಗೆ 8 ಗಂಟೆಗೆ  ನಡೆಯಲಿದೆ.

ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ವಿವೇಕಾನಂದರ ಪುತ್ಥಳಿಗೆ ಹಾರಾರ್ಪಣೆ ಮಾಡುವರು. ಸುಳ್ಯ ಸೇವಾ ಭಾರತಿ ಹೆಲ್ಫ್ ಲೈನ್ ಟ್ರಸ್ಟ್ ಅಧ್ಯಕ್ಷ ಡಾ.ಮನೋಜ್ ಅಡ್ಡಂತಡ್ಕ, ನ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಕಿಶೋರಿ ಶೇಟ್, ಸದಸ್ಯೆ ಶ್ರೀಮತಿ ಶೀಲಾ ಕುರುಂಜಿ, ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಸುಳ್ಯ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಕೊಯಿಂಗೋಡಿ ಭಾಗವಹಿಸಲಿದ್ದಾರೆ.