ಕೆವಿಜಿ ಐಪಿಎಸ್ ನಲ್ಲಿ ಅಗ್ನಿಶಾಮಕ ಮತ್ತು ಸುರಕ್ಷತಾ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

0

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಗೆ ಜ. 10 ರಂದು ಸುಳ್ಯದ ಅಗ್ನಿಶಾಮಕ ಮತ್ತು ಸುರಕ್ಷತಾ ಇಲಾಖೆಯವರು ಆಗಮಿಸಿ ‘ ಅನಿರೀಕ್ಷಿತವಾಗಿ ಬೆಂಕಿಯ ಅವಘಡ ಸಂಭವಿಸಿದರೆ ಯಾವ ರೀತಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಬೇಕೆಂಬುದನ್ನು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.


ಈ ಸಂದರ್ಭದಲ್ಲಿ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ಅವರು ‘ ವಿದ್ಯಾರ್ಥಿಗಳು ತುರ್ತು ಸಂದರ್ಭದಲ್ಲಿ ಯಾವ ರೀತಿ ಸಮಸ್ಯೆಗಳನ್ನು ಎದುರಿಸಬೇಕು ಎಂದು ತಿಳಿದುಕೊಳ್ಳುವುದು ಅತೀ ಅವಶ್ಯಕ ಎಂದು ಅಗ್ನಿಶಾಮಕ ದಳದವರಿಗೆ ವಂದಿಸಿದರು.

ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಎಸ್, ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ವಿದ್ಯಾರ್ಥಿಗಳು, ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಉಪಸ್ಥಿತರಿದ್ದರು.