ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವದ ಬಗ್ಗೆ ಪೂರ್ವಭಾವಿ ಸಭೆ

0

ಇತಿಹಾಸ ಪ್ರಸಿದ್ಧ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯುವ ಜಾತ್ರೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತುರವರ ಅಧ್ಯಕ್ಷತೆಯಲ್ಲಿ ಜ.11 ರಂದು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ಪ್ರದೀಪ್ ಕುಮಾರ್ ರೈ ಪನ್ನೆ ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.
ಆಮಂತ್ರಣ ಪತ್ರಿಕೆ ಮುದ್ರಣ,ವಿತರಣೆ,ಧಾರ್ಮಿಕ,ಸಾಂಸ್ಕೃತಿಕ ಕಾರ್ಯಕ್ರಮಗಳು,ಹಾಗು ಶಾಮಿಯಾನ,ಲೈಟಿಂಗ್ಸ್,ಇನ್ನಿತರ ವಿಷಯಗಳ ಬಗ್ಗೆ ಚರ್ಚೆಗಳು ನಡೆದವು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.