ಸುಳ್ಯ ಪೇಟೆಯಿಂದ ಪರಿವಾರಕಾನ ಕಡೆಗೆ ಹೋಗುತ್ತಿದ್ದ ಸ್ಕೂಟಿಗೆ ಹಿಂಬದಿಯಿಂದ ಬಂದ ಕಾರೋಂದು ಡಿಕ್ಕಿ ಹೊಡೆದು ಸ್ಕೂಟಿ ಸವಾರ ರಸ್ತೆ ಬದಿಯ ಗುಂಡಿಗೆ ಬಿದ್ದು ಗಾಯಗೊಂಡ ಘಟನೆ ಸಂಭವಿಸಿದೆ.
ಮಡಿಕೇರಿ ಕಡೆಗೆ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎಡ ಬದಿಯಲ್ಲಿ ಹೋಗುತ್ತಿದ್ದ ಸ್ಕೂಟಿ ಸವಾರನಿಗೆ ಹಿಂದುಗಡೆಯಿಂದ ಗುದ್ದಿತು. ಪರಿಣಾಮವಾಗಿ ರಸ್ತೆ ಬದಿ ತೆಗೆದಿರಿಸಿದ್ದ ಗುಂಡಿಯೊಳಗೆ ಬಿದ್ದು ಗಾಯಗೊಂಡರು. ಪರಿಣಾಮವಾಗಿ ಸವಾರ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಸ್ಕೂಟಿ ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.