ಗಾಯಾಳುಗಳು ಆಸ್ಪತ್ರೆಗೆ, ಎರಡೂ ಗಾಡಿ ಜಖಂ
ಸುಳ್ಯದ ಓಡಬಾಯಿ ಬಳಿ ಕಾರು ಹಾಗೂ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದ ಘಟನೆ ಇದೀಗ ಸಂಭವಿಸಿದೆ.
ಪೈಚಾರ್ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಹಾಗೂ ಸುಳ್ಯ ಕಡೆಯಿಂದ ಪೈಚಾರ್ ಕಡೆಗೆ ಹೋಗುತ್ತಿದ್ದ ರಿಕ್ಷಾ ಪರಸ್ಪರ ಡಿಕ್ಕಿಯಾಯಿತು. ಡಿಕ್ಕಿಯ ರಭಸಕ್ಕೆ ಎರಡೂ ಗಾಡಿಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಅಲ್ಪ ಸ್ವಲ್ಪ ಗಾಯಗಳಾಗಿವೆ. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಸ್ತೆಯಿದ್ದಕ್ಕೂ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿದ್ದು, ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.