ಸುಳ್ಯದ ದೇವಸ್ಯದಲ್ಲಿ ನೆಲೆಸಿರುವ ನಿವೃತ್ತ ಸರ್ಕಲ್ ಇನ್ ಸ್ಪೆಕ್ಟರ್ ಕೃಷ್ಣ ಮಣಿಯಾಣಿ ಯವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಇವರಿಗೆ 78 ವರ್ಷ ವಯಸ್ಸಾಗಿತ್ತು.
ಇವರು ಸುಳ್ಯ, ಪುತ್ತೂರು, ಉಪ್ಪಿನಂಗಡಿ ಮುಂತಾದ ಸ್ಟೇಷನ್ ಲ್ಲಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸಿ ನಂತರ ಸುಳ್ಯದಲ್ಲಿ ಸರ್ಕಲ್ ಇನ್ ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದರು.
ಕೆಲ ದಿನಗಳ ಹಿಂದೆ ಅಸೌಖ್ಯಕ್ಕೊಳಗಾಗಿ ಕಾಸರಗೋಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರೆಂದು ತಿಳಿದುಬಂದಿದೆ.
ಮೃತರು ಪತ್ನಿ ಕಮಲಾಕ್ಷಿ, ಪುತ್ರ ಪ್ರಸಾದ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.