ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜ.13 ರಂದು ಎಸ್. ಎಸ್.ಎಲ್. ಸಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಪುನಃಶ್ಚೇತನ ಕಾರ್ಯಾಗಾರ ನಡೆಯಿತು. ರೋಟರಿ ಕ್ಲಬ್ ಅಧ್ಯಕ್ಷರಾದ ರೊ.ಯೋಗಿತಾ ಗೋಪಿನಾಥ್ ಅಧ್ಯಕ್ಷತೆ ವಹಿಸಿ ಮಕ್ಕಳು ಗುರು ಹಿರಿಯರನ್ನು, ತಂದೆ ತಾಯಿಯನ್ನು ಗೌರವಿಸುವ , ಮತ್ತು ಪರೋಪಕಾರ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಮಕ್ಕಳಿಗೆ ಶುಭ ಹಾರೈಸಿದರು.
ರೋಟರಿ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ರೊ.ಪ್ರಭಾಕರನ್ ನಾಯರ್ ಮಾತನಾಡಿ ಉತ್ತಮ ಅಭ್ಯಾಸಗಳು ಜೀವನದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರಾಮಕುಂಜ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸತೀಶ್ ಭಟ್ ಬಿಳಿನೆಲೆಯವರು ಪರೀಕ್ಷೆಯ ತಯಾರಿ, ಎಸ್ ಎಸ್ ಎಲ್ ಸಿ ನಂತರ ಮುಂದೆ ಇರುವ ಅವಕಾಶಗಳು, ಹಾಗೂ ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಅರಿವು ಮೂಡಿಸಿದರು.
ಶಿಕ್ಷಕಿಯರಾದ
ಶ್ರೀಮತಿ ಚಂದ್ರಕಲಾ.ಡಿ . ಜಯಶ್ರೀ ಕೆ, ಉಷಾ. ಪಿ. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ಶೇಡಿಕಜೆ ಸ್ವಾಗತಿಸಿದರು ಮತ್ತು ವಂದಿಸಿದರು.
ವಿದ್ಯಾರ್ಥಿನಿಯರಾದ ಕು.ಪ್ರೇರಣಾ , ಕು. ವಂಶಿಕಾ, ಕು.ಗಾನವಿ , ಕು.ಸಿಂಚನಾ, ಕು. ವಿಭಾ ಪ್ರಾರ್ಥಿಸಿದರು. ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ ಕಾರ್ಯಕ್ರಮ ನಿರೂಪಿಸಿದರು.