ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಜ. 13ರಂದು ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಥಮಿಕ ವಿಭಾಗದ ಶಿಕ್ಷಕರಾದ ಶಶಿಧರ್ ಎಂ. ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ, ಅವರ ತತ್ವಗಳನ್ನು ಅಳವಡಿಸಿಕೊಳ್ಳುವುದು ಮತ್ತು ಇಡೀ ಜಗತ್ತಿನಾದ್ಯಂತ ಸಾಮರಸ್ಯದ ಮನೋಭಾವದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಯರಾದ ಜಯಪ್ರಸಾದ್ ಕಾರಿಂಜ, ಸಂಸ್ಥೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.