ಜ. 20 : ಸುಳ್ಯ ವೆಂಕಟರಮಣ ಸೊಸೈಟಿ ವತಿಯಿಂದ ಕೊಡಿಯಾಲಬೈಲು ಮಲ್ನಾಡು ಮಹಾತ್ಮಗಾಂಧಿ ವಿದ್ಯಾಸಂಸ್ಥೆಗೆ ನೀಡಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ

0

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ ಬೆಳ್ಳಿಹಬ್ಬ ಆಚರಣೆಯ ಸವಿನೆನಪಿಗಾಗಿ ಸಹಸಂಸ್ಥೆಯಾದ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗೆ ಕೊಡುಗೆ ನೀಡಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭವು ಜ. 20ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲಬೈಲು ಎಂ.ಜಿ.ಎಂ. ವಿದ್ಯಾಸಂಸ್ಥೆಗಳ ವಠಾರದಲ್ಲಿ ನಡೆಯಲಿರುವುದು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು। ಭಾಗೀರಥಿ ಮುರುಳ್ಯ ನೂತನ ಕೊಠಡಿಯ ಉದ್ಘಾಟನೆ ನಡೆಸಲಿರುವರು. ಮಾಜಿ ಸಚಿವ ಬಿ. ರಮಾನಾಥ ರೈ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಸುಳ್ಯ ಇದರ ಅಧ್ಯಕ್ಷ ಪಿ.ಸಿ.ಜಯರಾಮರವರು ಅಧ್ಯಕ್ಷತೆ ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ
ಸದಾನಂದ ಮಾವಜಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ, ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌಡ ಸಮುದಾಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ, ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಪೂರ್ಣಿಮಾ ಸೂಂತೋಡು, ಉಪಾಧ್ಯಕ್ಷ ಶ್ರೀಮತಿ ಚಿತ್ರ ಕುಮಾರಿ ಪಾಲಡ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ., ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ, ಎಂಜಿಎಂ ವಿದ್ಯಾಸಂಸ್ಥೆಗಳ ಸಂಚಾಲಕ ದೊಡ್ಡಣ್ಣ ಬರೆಮೇಲು ಉಪಸ್ಥಿತರಿರುವರು ಎಂದು ಆಡಳಿತ ಮಂಡಳಿ ತಿಳಿಸಿದೆ.