ಮುರುಳ್ಯ -ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಇಂದು ಚುನಾವಣೆ ನಡೆಯುತ್ತಿದೆ.
ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಮಧ್ಯೆ ನೇರ ಹಣಾಹಣಿ ನಡೆಯುತ್ತಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಮತಯಾಚನೆ ನಡೆಸುತ್ತಿದ್ದಾರೆ. ಮತದಾನ ನಡೆದು ಸಂಜೆ ಫಲಿತಾಂಶ ಹೊರಬೀಳಲಿದೆ.