ಶ್ರೀಮತಿ ಸರೋಜಿನಿ ಕೆಮ್ಮೂರು ಏಷ್ಯಾ ಮಾಸ್ಟರ್ ಅಥ್ಲೆಟಿಕ್ ನಲ್ಲಿ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ

0

ಸೌತ್ ಏಷ್ಯನ್ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ಸರೋಜಿನಿ ಕೆ ಬೆಳ್ಳಿ ಪದಕ
ಮಂಗಳೂರಿನ ಮಂಗಳ ಸ್ಟೇಡಿಯಂ ನಲ್ಲಿ ನಡೆದ ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ ನಲ್ಲಿ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತ ಮಾತ್ರವಲ್ಲದೆ ಭೂತಾನ್, ಶ್ರೀಲಂಕಾ ಬಾಂಗ್ಲಾದೇಶ, ನೇಪಾಳ ದೇಶಗಳು ಭಾಗವಹಿಸಿದ್ದವು. ಒಟ್ಟು 2,000 ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಇವರು ಈ ಹಿಂದೆ ಹಿರಿಯರ ಕ್ರೀಡಾಕೂಟ, ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಪದಕ ಪಡೆದಿರುತ್ತಾರೆ.ಇವರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘ ಟನಾ ಕಾರ್ಯದರ್ಶಿ ಯಾಗಿರುತ್ತಾರೆ. ಪಡ್ಪಿನಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ. ಕುಸುಮಾಧರ ಕೆಮ್ಮೂರು ಇವರ ಧರ್ಮಪತ್ನಿ