ಪೆರುವಾಜೆ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜಾತ್ರೋತ್ಸವ

0

ಇಂದು ದರ್ಶನ ಬಲಿ, ಬಟ್ಟಲು ಕಾಣಿಕೆ ದೀಪೋತ್ಸವ, ಪಲ್ಲಕ್ಕಿ ಉತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು,ದರ್ಶನ ಬಲಿ,ಬಟ್ಟಲು ಕಾಣಿಕೆ, ಪ್ರಸಾದ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ,ಪಲ್ಲಕ್ಕಿ ಉತ್ಸವ, ವಸಂತ ಕಟ್ಟೆ ಪೂಜೆ,ನೃತ್ಯ ಬಲಿ, ಮಹಾಪೂಜೆ,ಶ್ರೀ ಭೂತಬಲಿ ನಡೆಯಲಿದೆ. ರಾತ್ರಿ 8 ಕ್ಕೆ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.