ಕೊಡಗು ಸಂಪಾಜೆ: ನೇಣು ಬಿಗಿದು ಯುವಕ ಆತ್ಮಹತ್ಯೆ

0

ಯುವಕನೋರ್ವ ಮನೆಯ ಕೋಣೆಯೊಳಗೆ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.18 ರಂದು ಬೆಳಿಗ್ಗೆ ಕೊಡಗು ಸಂಪಾಜೆಯಲ್ಲಿ ಸಂಭವಿಸಿದೆ.

ಸಂಪಾಜೆಯ ಜಮೀರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ 47 ವರ್ಷ ವಯಸ್ಸಾಗಿತ್ತು.
ಅವರು ಸ್ವಂತವಾಗಿ ಕಬ್ಬಿಣದ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಅವರ ಮನೆಯವರು ರೂಮಿಗೆ ಹೋಗಿ ನೋಡಿದಾಗ ಮನೆಯ ಪಕ್ಕಾಸಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಕೊಡಗು ಸಂಪಾಜೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ತಿಳಿದು ಬಂದಿಲ್ಲ.
ಮೃತರು ಸಹೋದರ ಅಮೀರ್, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.