ಜ‌.26 – 28: ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ

0

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪೂರ್ವಶಿಷ್ಠ ಸಂಪ್ರದಾಯದಂತೆ ಶ್ರೀ ಮಹಾವಿಷ್ಣು ದೇವರ ಕಾಲಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ದೇಲಂಪಾಡಿ ಗಣೇಶ್ ತಂತ್ರಿವರ್ಯರ ಮಾರ್ಗದರ್ಶನದಲ್ಲಿ ಜ.26ರಿಂದ 28ರವರೆಗೆ ಜರುಗಲಿದೆ.

ಜ.26ರಂದು ಸಂಜೆ ಶ್ರೀ ಚೆನ್ನಕೇಶವ ದೇವಾಲಯದ ಸಂಸ್ಕಾರ ದೀಪಿಕೆ ವಿದ್ಯಾರ್ಥಿಗಳಿಂದ ಭಗವದ್ಗೀತೆ ಪಠಣ ಮತ್ತು ವಿಷ್ಣು ಸಹಸ್ರನಾಮ ಪಾರಾಯಣ , ಸಂಜೆ ಜಾತ್ರೋತ್ಸವ ಪ್ರಯುಕ್ತ ಶ್ರೀ ದೇವರಿಗೆ ದೀಪೋತ್ಸವ, ಸಂಜೆ ಅರಂಬೂರು ಭಾರಧ್ವಾಜಾಶ್ರಮ ಶ್ರೀ ಕಾಂಚಿಕಾಮಕೋಟಿ ವೇದ ವಿದ್ಯಾಲಯದ ವಿದ್ಯಾರ್ಥಿಗಳಿಂದ ವೇದ ಪಾರಾಯಣ, ರಾತ್ರಿ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದ್ದು, ಬಳಿಕ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ.

ಜ.27ರಂದು ಬೆಳಿಗ್ಗೆ ಗಣಪತಿ ಹವನ, ಹಸಿರುವಾಣಿ ಮೆರವಣಿಗೆ, ಉಗ್ರಾಣ ತುಂಬಿಸುವುದು,ತಂತ್ರಿಗಳ ಆಗಮನ, ಶುದ್ಧಿಕಲಶ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ ದೇವರಿಗೆ ಮಹಾಪೂಜೆ, ಅನ್ನಸಂತರ್ಪಣೆ ಬಳಿಕ ಶ್ರೀ ದೇವರ ಭೂತಬಲಿ ಉತ್ಸವ, ಕಟ್ಟೆಪೂಜೆ ನಡೆಯಲಿದೆ.

ಜ.28ರಂದು ಬೆಳಿಗ್ಗೆ ದೇವರ ಶ್ರೀಬಲಿ, ದರ್ಶನಬಲಿ, ಬಟ್ಟಲುಕಾಣಿಕೆ, ಶ್ರೀಮುಡಿ ಗಂಧ ಪ್ರಸಾದ ಮತ್ತು ಶ್ರೀ ದೇವರಿಗೆ ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಶ್ರೀ ದೇವರಿಗೆ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ಜರುಗಲಿದೆ. ರಾತ್ರಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ಮೂಡಬಿದಿರೆ ಸಾದರ ಪಡಿಸುವ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ವಿರಚಿತ ‘ನರಶಾರ್ದೂಲ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ