ಜ. 26-29: ಅಯ್ಯನಕಟ್ಟೆ ಜಾತ್ರೋತ್ಸವ – ಉಗ್ರಾಣ ಮುಹೂರ್ತ ಗೊನೆ ಕಡಿಯುವ ಕಾರ್ಯ

0

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ವತಿಯಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು ಮತ್ತು ಪರಿವಾರ ದೈವಗಳ ಜಾತ್ರೋತ್ಸವ ಜ.26 ರಿಂದ ಜ.29 ರ ವರಗೆ ನಡೆಯಲಿದ್ದು, ಉಗ್ರಾಣ ಮುಹೂರ್ತ ಮತ್ತು ಗೊನೆ ಕಡಿಯುವ ಕಾರ್ಯಕ್ರಮ ಜ. 20 ರಂದು ಮೂರುಕಲ್ಲಡ್ಕದಲ್ಲಿ ನಡೆಯಿತು.

ಪ್ರಧಾನ ದೈವದ ಪಾತ್ರಿ ಲಕ್ಷ್ಮಣ ಗೌಡ ಬೇರಿಕೆ ಪ್ರಾರ್ಥನೆ ಸಲ್ಲಿಸಿ, ಪೂಜೆ ನೆರವೇರಿಸಿದರು. ಗೌರವಾಧ್ಯಕ್ಷ, ವಿಶ್ವಸ್ಥರಾದ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ಎನ್. ವಿಶ್ವನಾಥ ರೈ ಕಳಂಜ, ವೆಂಕಟ್ರಮಣ ಗೌಡ ತಂಟೆಪ್ಪಾಡಿ, ಶೀನಪ್ಪ ಗೌಡ ತೋಟದಮೂಲೆ,
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ, ಕಾರ್ಯದರ್ಶಿ ಪ್ರಶಾಂತ್ ಕಿಲಂಗೋಡಿ, ಪ್ರಭಾಕರ ಆಳ್ವ ಬಜನಿಗುತ್ತು, ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಶ್ರೀನಾಥ್ ರೈ, ಕಾರ್ಯಾಧ್ಯಕ್ಷ ಚಂದ್ರಶೇಖರ ರೈ ಬಜನಿ, ಉಪಾಧ್ಯಕ್ಷ ಅನಂತಕೃಷ್ಣ ತಂಟೆಪ್ಪಾಡಿ, ಸದಸ್ಯರಾದ ಜಗನ್ನಾಥ ರೈ ಉರುಂಬಿ, ಕೃಷ್ಣಪ್ಪ ಪೂಜಾರಿ ಮೂಲೆಮಜಲು, ಗಂಗಾಧರ ತೋಟದಮೂಲೆ, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ, ಕಾರ್ಯಾಧ್ಯಕ್ಷರಾದ ಚಂದ್ರಶೇಖರ ರೈ ಬಜನಿ, ಕಾರ್ಯದರ್ಶಿ ಕುಶಾಲಪ್ಪ ಗೌಡ ಬಿ ಮಣಿಮಜಲು, ಉಪಾಧ್ಯಕ್ಷ ಪುರೋಷತ್ತಮ ಗೌಡ ತಂಟೆಪ್ಪಾಡಿ ಮಾರ್ಗದರ್ಶಕ ಮಂಡಳಿ ಸದಸ್ಯರಾದ ಮುಂಡುಗಾರು ಸುಬ್ರಹ್ಮಣ್ಯ, ಸುಧಾಕರ ರೈ ಎಂ, ಬಾಳಿಲ ರಾಮಚಂದ್ರ ರಾವ್ ಗೋಕುಲ, ರುಕ್ಮಯ್ಯ ಗೌಡ ಕಳಂಜ, ಅಚ್ಚುತ ಗೌಡ ಬಾಳಿಲ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ದೈವಗಳ ಸೇವಾ ಕರ್ತೃಗಳು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.