ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಗೆ ನೂತನ ಅಧ್ಯಕ್ಷರಾಗಿ ಮೀರಝ್ ಸುಳ್ಯ ಆಯ್ಕೆಯಾಗಿದ್ದಾರೆ.
ಸವಣೂರಿನ ಮಾಂತೂರು ಅಂಬೇಡ್ಕರ್ ಭವನದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ರವರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆಯ ಮೂಲಕ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನೂತನ ಅಧ್ಯಕ್ಷರಾದ ಮೀರಝ್ ರವರು ಸುಳ್ಯ ವಿಧಾನಸಭಾ ಕ್ಷೇತ್ರದ ಬಹು ದೊಡ್ಡ ಜವಾಬ್ದಾರಿಯನ್ನು ನೀವು ಎಲ್ಲರೂ ನನಗೆ ನೀಡಿದ್ದೀರಿ, ಅದೇ ರೀತಿ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡ ಪಕ್ಷದ ಬೆಳವಣಿಗೆಯಲ್ಲಿ, ಚಟುವಟಿಕೆಯಲ್ಲಿ ನನ್ನ ಜೊತೆಯಾಗಿ ನಿಲ್ಲಬೇಕು. ಪಕ್ಷವನ್ನು ಗ್ರಾಮೀಣ ಭಾಗಗಳಿಗೆ ವಿಸ್ತರಿಸಬೇಕು ನಾವೆಲ್ಲರೂ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದಿಕ್ ಅಲೆಕ್ಕಾಡಿ, ಕೆ ಎ ಸಿದ್ಧಿಕ್ ಪುತ್ತೂರು,
ಕಲಾಂ ಸುಳ್ಯ, ಅಡ್ವಕೇಟ್ ಕಬೀರ್ ಆತೂರು, ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಸರ್ವ ಸದಸ್ಯರು, ಬ್ಲಾಕ್ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.