ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಇದರ ನೂತನ ಉಪಕಾರ್ಯದರ್ಶಿ ಶ್ರೀಮತಿ ಜಯಲಕ್ಷ್ಮಿ ಅವರು ಜ.23ರಂದು ಅರಂತೋಡು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗ್ರಾಮ ಪಂಚಾಯಿತಿನ ನಲ್ಲಿ ದಾಖಲೆಗಳನ್ನು ಪರಿಶೀಲಿಸಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂ.ಅ.ಅ., ಸಿಬ್ಬಂದಿಗಳ ಜೊತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು. ನಂತರ ಗ್ರಾಮ ಪಂಚಾಯತ್ ಜಿಮ್ ಕೇಂದ್ರ, ಅಮೃತ ಸಭಾಂಗಣ, ಘನ ತ್ಯಾಜ್ಯ ಘಟಕ ಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ಸಹಾಯಕ ನಿರ್ದೇಶಕರಾದ ರವಿಚಂದ್ರ, ತಾಂತ್ರಿಕ ಸಂಯೋಜಕರಾದ ಅಶ್ವಿನ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ದ. ಕ. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಸುಳ್ಯ ತಾಲೂಕಿಗೆ ಮೊದಲ ಭೇಟಿ ಯಲ್ಲಿ ಆರಂತೋಡು ಪಂಚಾಯತ್ ಗೆ ಭೇಟಿ ನೀಡಿದರು.