ಜ.26 ರಂದು ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘದ ಮಹಾಸಭೆ

0

ಸುಳ್ಯ ತಾಲೂಕು ಅಟೋರಿಕ್ಷಾ ಚಾಲಕರ ಸಂಘ ಬಿ.ಯಂ.ಎಸ್. ಸಂಯೋಜಿತ ಸುಳ್ಯ ಇದರ ವಾರ್ಷಿಕ ಮಹಾಸಭೆಯು ಜ.26 ರಂದು ಹಳೆಗೇಟಿನ ಕಾರ್ಮಿಕ ಸಮುದಾಯ ತಿಲಕ ಭವನದಲ್ಲಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು., ಭಾರತೀಯ ಮಜ್ದೂರು ಸೇವಾ ಟ್ರಸ್ಟ್‌ ನ ಅಧ್ಯಕ್ಷ ಪಿ.ಗೋಪಾಲಕೃಷ್ಣ ಭಟ್, ಕರ್ನಾಟಕ ಇಂಡಸ್ಟ್ರಿಯಲ್ ಸ್ಟಾಫ್ ಯೂನಿಯನ್ ಅಧ್ಯಕ್ಷ ಭಾಸ್ಕರ ರಾವ್, ಪೊಲೀಸ್ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಭಾಗವಹಿಸಲಿದ್ದಾರೆ.