ಪಂಜ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.24 ರಂದು ಮೆಟ್ರಿಕ್ ಮೇಳ ನಡೆಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ಲಿಗೋಧರ ಆಚಾರ್ಯ ಎನ್ ರವರು ಉದ್ಘಾಟಿಸಿ ಶುಭ ಹಾರೈಸಿದರು.ಉಪಾಧ್ಯಕ್ಷೆ ಸೌಮ್ಯಶ್ರೀ ಪಲ್ಲೋಡಿ, ಎಸ್ ಡಿ ಎಂ ಸಿ ಪೂರ್ವಾಧ್ಯಕ್ಷ ಸೋಮಶೇಖರ ನೇರಳ, ಮುಖ್ಯ ಶಿಕ್ಷಕಿ ಶ್ರೀಮತಿ ಲೀಲಾ ಕುಮಾರಿ
ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಗಣಿತ ಶಿಕ್ಷಕ ಮೋಹನ್ ಪ್ರಸಾದ್ ಮಾರ್ಗದರ್ಶನ ನೀಡಿದರು. ಶಿಕ್ಷಕ ಹರೀಶ್ ಕಜೆ ನಿರೂಪಿಸಿದರು.
ವಿದ್ಯಾರ್ಥಿಗಳು ವಿವಿಧ ಬಗೆಯ ತಿಂಡಿ ತಿನಿಸುಗಳು, ಪಾನೀಯಗಳು, ತರಕಾರಿಗಳನ್ನು ಮಾರಾಟ ಮಾಡುವ ಮೂಲಕ ವ್ಯಾವಹಾರಿಕ ಜ್ಞಾನವನ್ನು ಹೆಚ್ಚಿಸಿಕೊಂಡರು.