ದೇವಚಳ್ಳ ಸ.ಹಿ.ಪ್ರಾ.ಶಾಲಾ ಶತಮಾನೋತ್ಸವ ಸಂಭ್ರಮ

0

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮತ್ತು ದಾನಿಗಳಿಗೆ ಸನ್ಮಾನ

ಸೌಹಾರ್ದತೆಯ ಊರು ಎಲಿಮಲೆ: ಗಣ್ಯರ ಅಭಿಮತ

ಶತಮಾನೋತ್ಸವ ಸಂಭ್ರಮದಲ್ಲಿರುವ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಲಿಮಲೆಯಲ್ಲಿ ಶತಸಂಭ್ರಮ ಕಾರ್ಯಕ್ರಮದ ಅಂಗವಾಗಿ ಜ.24 ರಂದು ಸಂಜೆ ಸಭಾ ಕಾರ್ಯಕ್ರಮ ಮತ್ತು ದಾನಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.


ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅಕ್ಷರ ಸಂತ ಹರೇಕಳ ಹಾಜಬ್ಬ ಭಾಗವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಮತಿ ಲೀಲಾವತಿ ಸೇವಾಜೆ,ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀಮತಿ ವಂದನಾ ಹೊಸ್ತೋಟ, ಗುತ್ತಿಗಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಸುಳ್ಯ ಶ್ರೀ ವೆಂಕಟರಮಣ ಸೊಸೈಟಿ ಅಧ್ಯಕ್ಷರಾದ ಪಿ.ಸಿ. ಜಯರಾಮ,ನೆಲ್ಲೂರು ಕೆಮ್ರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ,ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ‌ ಸಮಿತಿ ಮಾಜಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ,ಲೋಕೇಶ್ ಅಂಬೆಕಲ್ಲು ಬೆಂಗಳೂರು, ನಿವೃತ್ತ ಅಧ್ಯಾಪಕ ಕೆ. ಪುರುಷೋತ್ತಮ ಗೌಡ ಕೇಪಳಕಜೆ, ಎಲಿಮಲೆ ಸರ್ಕಾರಿ ಪ್ರೌಢಶಾಲೆಯ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಧನಂಜಯ ಬಾಳೆತೋಟ,ಜ್ಞಾನದೀಪ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗದಾಧರ ಬಾಳುಗೋಡು, ಸ್ಥಳದಾನಿಗಳ ಮೊಮ್ಮಗ ಹಮೀದ್ ವೈ.ಎಂ.ಎಲಿಮಲೆ ಭಾಗವಹಿಸಿ ಮಾತನಾಡಿದರು.

ಇಲ್ಲಿಯ ಜನರು ಶಾಲೆಯ ಅಭಿವೃದ್ಧಿಗೆ ಜಾತಿ ಧರ್ಮ ಮರೆತು ಕೊಡುಗೆಯನ್ನು ನೀಡಿದ್ದಾರೆ. ಎಲಿಮಲೆ ಸೌಹಾರ್ದತೆಯ ಊರು ಎಂದು ಗಣ್ಯರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಹರೇಕಳ ಹಾಜಬ್ಬ ಮತ್ತು ಶತಮಾನೋತ್ಸವಕ್ಕೆ ಕೊಡುಗೆ ನೀಡಿದ ದಾನಿಗಳನ್ನು,ಸಹಕಾರ ನೀಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಶ್ರೀಧರ ಗೌಡ ಕೆರೆಮೂಲೆ ಸ್ವಾಗತಿಸಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿಪ್ರಸಾದ್ ಬಿ.ವಿ.ವಂದಿಸಿದರು. ಹರಿಶ್ಚಂದ್ರ ಚಳ್ಳ, ಮುರಳೀಧರ ಪುನ್ಕುಟ್ಟಿ, ಬೆಳ್ಯಪ್ಪ ಕೋಡ್ತುಗುಳಿ ಕಾರ್ಯಕ್ರಮ ನಿರೂಪಿದರು.
ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಂಭ್ರಮ ನಡೆಯಿತು.