ಮಹಿಳಾ ಮಂಡಲಗಳ ಒಕ್ಕೂಟದ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ

0

ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಯೋಜಿಸಲ್ಪಟ್ಟಿರುವ ಮಹಿಳಾ ಕ್ರೀಡಾಕೂಟ – 2025 ರ ಉದ್ಘಾಟನೆ ಇದೀಗ ನೆರವೇರಿದೆ. ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಬಳಿಯಲ್ಲಿರುವ ಜೂನಿಯರ್ ಕಾಲೇಜ್ ಮೈದಾನದಲ್ಲಿ ಆಯೋಜಿತವಾದ ಈ ಕ್ರೀಡಾಕೂಟವನ್ನು ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎ. ನೀರಬಿದಿರೆ ಉದ್ಘಾಟಿಸಿದರು.


ಅಂತಾರಾಷ್ಟ್ರೀಯ ಹಿರಿಯರ ಕ್ರೀಡಾಪಟು ಶ್ರೀಮತಿ ಸರಸ್ವತಿ ಕಾಮತ್ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.


ಸರ್ಕಲ್ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್, ರೇಂಜರ್ ಮಂಜುನಾಥ್, ನ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷೆ ಶ್ರೀಮತಿ ಕಿಶೋರಿ ಶೇಟ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಮಾಜಿ ಅಧ್ಯಕ್ಷೆ ಶ್ರೀಮತಿ ಹರಿಣಿ ಸದಾಶಿವ, ಕ್ರೀಡಾಪಟು ಶ್ರೀಮತಿ ಸರಿತಾ ಎನ್.ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಮಧುಮತಿ ಬೊಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷೆ ಶ್ರೀಮತಿ ತ್ರಿವೇಣಿ ದಾಮ್ಲೆ, ತಾಲೂಕು ಒಕ್ಕೂಟದ ಖಜಾಂಚಿ ಶ್ರೀಮತಿ ಚಂದ್ರಾಕ್ಷಿ ಜೆ.ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಕ್ಕೂಟದ ಕಾರ್ಯದರ್ಶಿ ಅನಿತಾ ಸುತ್ತುಕೋಟೆ ವಂದಿಸಿದರು. ಎಂ.ಜೆ.ಶಶಿಧರ್ ಮತ್ತು ಶ್ರೀಮತಿ ಹೇಮಾವತಿ ವೇಣುಗೋಪಾಲ್ ಕಾರ್ಯಕ್ರಮ ನಿರೂಪಿಸಿದರು.