ಸ್ನೇಹ ಶಾಲೆಯಲ್ಲಿ 76 ನೇ ಗಣರಾಜ್ಯೋತ್ಸವ

0

“ದೇಶದ ಸಂವಿಧಾನವನ್ನು 1950 ಜನವರಿ 26 ರಂದು ಅಂಗೀಕರಿಸಲಾಯಿತು. ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತೇವೆ.ದೇಶದ ಅಭಿವೃದ್ಧಿಯಲ್ಲಿ ಯಾವುದೇ ಜಾತಿ, ಮತ, ಭೇದವಿಲ್ಲದೆ ಅಪ್ಪಟ ದೇಶಭಕ್ತರಾಗಿ ಬೆಳೆಯಬೇಕು ಹಾಗೂ ಪ್ರಕೃತಿ,ಪರಿಸರ ಮತ್ತು ದೇಶದ ಒಳಿತಿಗಾಗಿ ಶ್ರಮಿಸಬೇಕು ಎಂದು ಸ್ನೇಹ ಶಾಲೆಯ ಸಂಚಾಲಕರಾದ ಡಾ. ವಿದ್ಯಾ ಶಾಂಭವ ಪಾರೆಯವರು ಜನವರಿ 26ರಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿದಾಮ್ಲೆ ಮಕ್ಕಳಿಗೆ ಸಂವಿಧಾನದ ಬಗ್ಗೆ ಮಾತನಾಡಿ ನಮ್ಮ ಹಕ್ಕು ಕರ್ತವ್ಯಗಳ ಬಗ್ಗೆ ಮಕ್ಕಳಿಗೆ ಹಿತನುಡಿಗಳನ್ನು ಹೇಳಿದರು.ಶಾಲಾ ಅಧ್ಯಕ್ಷರಾದ ಚಂದ್ರಶೇಖರ ದಾಮ್ಲೆ ಅವರು ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಇವರು ಎಲ್ಲರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಸವಿತಾ.ಎಂ. ಇವರು ಎಲ್ಲರಿಗೂ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳು ದೇಶಭಕ್ತಿಗೀತೆ ಹಾಡಿದರು.