ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜ. 25 ರಂದು ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ನೇತೃತ್ವದಲ್ಲಿ ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಬೀದಿ ನಾಟಕ ಮಾನವ ಸರಪಳಿ ಜಾಥ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾದರ್ ಡಿ.ವಿ., ಎನ್ಎಸ್ಎಸ್ ಯೋಜನಾಧಿಕಾರಿಯಿಯಾದ ಡಾ. ಪ್ರಮೋದ ಪಿ.ಎ., ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.