ಜಾಲ್ಸುರು ಗ್ರಾಮದ ಕೋನಡ್ಕ ಪದವು ಅಂಗನವಾಡಿ ಕೇಂದ್ರದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ರಿಕ್ಷಾ ಚಾಲಕ ಮಾಲಕ ಸಂಘದ ಬಿಎಮ್ಎಸ್ ಘಟಕ ಜಾಲ್ಸುರು ಅಧ್ಯಕ್ಷ ಗೋಪಾಲ ಪದವು ನೆರವೇರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಕ್ಷತಾ ಕಮಲಾಕ್ಷ ಹಾಗೂ ಪೋಷಕರು, ತಾಯಂದಿರು, ಹಳೆ ವಿದ್ಯಾರ್ಥಿಗಳು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಿವೇದಿತಾ ವಸಂತ ಪ್ರಾರ್ಥಿಸಿ ಸ್ವಾಗತಿಸಿ ವಂದಿಸಿದರು. ಸಹಾಯಕಿ ಶಾರದಾ ಸಹಕರಿಸಿದರು.