ಎಡಮಂಗಲ ಗ್ರಾಮದ ಎಡಮಂಗಲ ಹಾಲು ಉತ್ಪಾದಕರ ಸಹಕಾರ ಸಂಘದ ಬೆಳ್ಳಿಹಬ್ಬ ಕಾರ್ಯಕ್ರಮ ಜ.30ರಂದು ನಡೆಯಲಿದೆ.
ಬೆಳ್ಳಿಹಬ್ಬ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಂಟೆ 10ಕ್ಕೆ
ಹಾಲು ಕರೆಯುವ ಸ್ಪರ್ಧೆ ಮತ್ತು ಮಿಶ್ರತಳಿ ಹೆಣ್ಣು ಕರುಗಳ ಪ್ರದರ್ಶನ ನಡೆಯಲಿದೆ.
ಬೆಳಿಗ್ಗೆ ಗಂಟೆ 10.30ಕ್ಕೆ
ಉದ್ಘಾಟನಾ ಸಮಾರಂಭ
ಕಾರ್ಯಕ್ರಮ ನಡೆಯಲಿದ್ದು,ಉದ್ಘಾಟನೆಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ದಾಮೋದರ ಗೌಡ
ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಸೇರಿದಂತೆ ನಿರ್ದೇಶಕರು, ಅಧಿಕಾರಿಗಳು, ಗಣ್ಯರು ಭಾಗವಹಿಸಲಿದ್ದಾರೆ.