ಅರಂತೋಡು ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಗಣ ರಾಜ್ಯೋತ್ಸವ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

0

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವ ಆಚರಣೆ ಮತ್ತು ನಿರಂತರವಾಗಿ ನಡೆಯುತ್ತಿರುವ ತಿಂಗಳ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮವು ಜ.26 ರಂದು ನಡೆಯಿತು.

ಗ್ರಾಂ.ಪಂ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಧ್ವಜೋಹರಣ ನೆರವೇರಿಸಿ ಶುಭ
ಹಾರೈಸಿದರು. ಗ್ರಾಂ.ಪಂ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಮ್.ಆರ್. ಎಲ್ಲರನ್ನು ಸ್ವಾಗತಿಸಿ. ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಬಳಿಕ ಅರಂತೋಡು ಪೇಟೆಯಲ್ಲಿ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಅಕ್ಷಯ ಸ್ತ್ರೀ ಶಕ್ತಿ ಗೊಂಚಲಿನ ಸದಸ್ಯರು, ಮತ್ತು ಪಂಚಾಯತ್ ಆಡಳಿತ ಸಮಿತಿ ಸಿಬ್ಬಂದಿ ವರ್ಗ, ಸ್ವಚ್ಛತಾ ಘಟಕದ ಸಿಬ್ಬಂದಿಗಳು ಹಾಗೂ ಊರ ನಾಗರಿಕರ ಸಹಕಾರದಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರಾದ ಭವಾನಿ ಚಿಟ್ಟನೂರು, ಪಂಚಾಯತ್ ಸದಸ್ಯರಾದ ಪುಷ್ಪಾಧರ ಕೊಡಂಕಿರಿ , ಮತ್ತು ಊರ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಸ್ವಚ್ಛತಾ ಘಟಕದ ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಕಾರ್ಯಕ್ರಮದ ನಿರ್ವಹಣೆ ಮಾಡಿದರು.ಬಳಿಕ ಲಘು ಉಪಹಾರದೊಂದಿಗೆ ಕಾರ್ಯಕ್ರಮ ಸಮಾಪ್ತಿಗೊಂಡಿತು.