ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಿ : ಚಿದಾನಂದ ಬಾಳಿಲ
ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೆವಿಜಿ ಐಟಿಐ ಕಾಲೇಜಿನ ಪ್ರಾಂಶುಪಾಲ ಚಿದಾನಂದ ಬಾಳಿಲ ಧ್ವಜಾರೋಹಣವನ್ನು ನೆರವೇರಿಸಿ ‘ ಸಂವಿಧಾನದ ಹಕ್ಕು ಮತ್ತು ಕರ್ತವ್ಯಗಳನ್ನು ನಾವು ಪಾಲಿಸಿಕೊಂಡು, ನಮ್ಮ ದೇಶಕ್ಕೆ ಯಾವುದೇ ರೀತಿಯ ಚ್ಯುತಿ ಬರದಂತೆ ನೋಡಿಕೊಳ್ಳುವುದು ವಿದ್ಯಾರ್ಥಿಗಳ ಕರ್ತವ್ಯ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೆವಿಜಿ ಐಪಿಎಸ್ ನ ಪ್ರಾಂಶುಪಾಲ ಅರುಣ್ ಕುಮಾರ್ ಎಸ್ ಸ್ವಾಗತಿಸಿ, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ವಂದಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್, ಕಮಿಟಿ ‘ಬಿ ‘ವಿಭಾಗದ ನಿರ್ದೇಶಕಿ ಡಾ. ಅಭಿಜ್ಞ ಕೆ ಆರ್, ಕೆವಿಜಿ ಡೆಂಟಲ್ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕ ಮೌರ್ಯ ಆರ್ ಕುರುಂಜಿ, ಕೆವಿಜಿ ಐಪಿಎಸ್ ನ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಅಮರ ಜ್ಯೋತಿ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ದೀಪಕ್ ವೈ.ಆರ್, ಕೆವಿಜಿ ಐಟಿಐ ಉಪ ಪ್ರಾಂಶುಪಾಲ ದಿನೇಶ್ ಮಡ್ತಿಲ ಮತ್ತು ಕೆವಿಜಿ ಐಪಿಎಸ್, ಕೆವಿಜಿ ಐಟಿಐ, ಅಮರ ಜ್ಯೋತಿ ಪಿಯು ಕಾಲೇಜಿನ ಬೋಧಕ ಮತ್ತು ಬೋಧಕೇತರ ವೃಂದದವರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.