ಪೆರಾಜೆ ಶ್ರೀ ಶಾಸ್ತ್ರಾವು ದೇವಸ್ಥಾನದಲ್ಲಿ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ರುದ್ರಯಾಗ, ದೇವರಿಗೆ ಕಲಶಾಭಿಷೇಕ ಹಾಗೂ ನೂತನ ರಾಜಗೋಪುರ/ಪಡ್ಪಿರೆ ಉದ್ಘಾಟನಾ ಸಮಾರಂಭ ಮತ್ತು ಧಾರ್ಮಿಕ ಸಭೆ ಜ.30ರಂದು ನಡೆಯಲಿದೆ.
ಅಂದು ಬೆಳಿಗ್ಗೆ ನೂತನ ರಾಜಗೋಪುರದಲ್ಲಿ ಗಣಪತಿ ಹವನ, ರುದ್ರಯಾಗ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.ಸಂಜೆ 4ರಿಂದ ನೂತನ ರಾಜಗೋಪುರ ಉದ್ಘಾಟನೆ ಹಾಗೂ ಧಾರ್ಮಿಕ ಸಭೆ ನಡೆಯಲಿದೆ.
ರಾಜ್ಯದ ಸಾರಿಗೆ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ನೂತನ ರಾಜಗೋಪುರ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸರಾಜು ಎನ್. ಎಸ್. ಆಡಳಿತ ಕಚೇರಿ ಉದ್ಘಾಟಿಸಲಿದ್ದಾರೆ.ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಧಾನಿಗಳ ನಾಮ ಫಲಕ ಅನಾವರಣ ಮಾಡಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ ವಹಿಸಲಿದ್ದಾರೆ. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳು ಶುಭಾಶೀರ್ವಾದ ಮಾಡಲಿದ್ದಾರೆ. ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ, ವಿಧಾನಸಭೆಯ ಮಾಜಿ ಅಧ್ಯಕ್ಷರಾದ ಕೆ ಜಿ ಬೋಪಯ್ಯ,ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಶಿಕ್ಷಣ ತಜ್ಞ ಪ್ರೊ. ಕೆ.ಇ. ರಾಧಾಕೃಷ್ಣ ,ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಾಲಚಂದ್ರ,ಶ್ರೀ ಕ್ಷೇತ್ರ ತಲಕಾವೇರಿಯ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಭಾಗವಹಿಸಲಿದ್ದಾರೆ.ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.