ಫೆ. 7: ಕಳಂಜ‌ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಚುನಾವಣೆ- ಓರ್ವ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಆಡಳಿತ ಮಂಡಳಿಗೆ ಚುನಾವಣೆ ಫೆ. 7ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜ. 26ರಂದು ಆರಂಭಗೊಂಡಿದೆ‌.

ಜ. 26ರಂದು ಒರ್ವ ಅಭ್ಯರ್ಥಿ ಕೌಶಿಕ್ ಕೊಡಪಾಲ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಜ. 30ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜ. 31 ನಾಮಪತ್ರ ಪರಿಶೀಲನೆ ನಡೆದು ಫೆ. 1ರಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಫೆ. 7ರಂದು ಮತದಾನ ನಡೆದು ಅದೇ ದಿನ ಸಂಜೆ ಫಲಿತಾಂಶ ಪ್ರಕಟಗೊಳ್ಳಲಿದೆ.