ಬೆಳ್ಳಾರೆ ಕೆ.ಪಿ.ಎಸ್.ನಲ್ಲಿ ಗಣರಾಜ್ಯೋತ್ಸವ ಆಚರಣೆ

0

ಕೆಪಿಎಸ್ ಬೆಳ್ಳಾರೆಯಲ್ಲಿ 76ನೇ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶ್ರೀನಾಥ್ ರೈ ಬಾಳಿಲ ಅವರು ನೆರವೇರಿಸಿ ಶುಭಹಾರೈಸಿದರು.

ಸಮಾರಂಭದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರುಗಳಾದ ಶಿವಾಜಿ ಮಣಿಮಜಲು, ಪ್ರಾಂಶುಪಾಲರಾದ ಜನಾರ್ಧನ ಕೆ ಎನ್, ಉಪಪ್ರಾಂಶುಪಾಲರಾದ ಉಮಾಕುಮಾರಿ, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಎನ್.ಸಿ.ಸಿ. ಎನ್.ಎಸ್.ಎಸ್. ಸ್ಕೌಟ್ ಗೈಡ್ ಘಟಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಧ್ವಜಾರೋಹಣ ಬಳಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ವನ್ನು ಶಿಕ್ಷಕರಾದ ಪುಷ್ಪಾವತಿ ಪಿ, ಶ್ರೀ ಲತಾ ಎ. ಎಸ್ ನಿರ್ವಹಿಸಿದರು.