ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ – ಜಾಗೃತಿ ಕಾರ್ಯಕ್ರಮ

0

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ವಿಭಾಗ ಹಾಗೂ ಸ್ತ್ರೀ ರೋಗ ಮತ್ತು ಪ್ರಸೂತಿ ವಿಭಾಗದ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮ ಜ. 23ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳ ವಿಭಾಗದ ಪ್ರೊಫೆಸರ್ ಡಾ. ಸುಧಾ ರುದ್ರಪ್ಪ, ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ ಮುಖ್ಯಸ್ಥೆ ಪ್ರೊ. ಡಾ ಗೀತಾ ದೊಪ್ಪ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷೆ ಡಾ. ವೀಣಾ, ಒ.ಬಿ.ಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಹಸ್ರಿನ ಫಾತಿಮಾ, ಮಕ್ಕಳ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ ಡಾ ಸಪ್ತಮಿ ಕಾರ್ಯಕ್ರಮದ ಕುರಿತಾಗಿ ಮಾತನಾಡುವುದರೊಂದಿಗೆ ಜಾಗೃತಿ ಮೂಡಿಸಿದರು.

ಒ. ಬಿ. ಜಿ ವಿಭಾಗದ ಯುನಿಟ್ ಹೆಡ್ ಹಾಗೂ ಪ್ರಾದ್ಯಾಪಕರಾದ ಡಾ. ರವಿಕಾಂತ್, ಮಕ್ಕಳ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಗೌರವ್, ಡಾ ಸುನೀತಾ, ಒ. ಬಿ. ಜಿ ವಿಭಾಗದ ಪ್ರಾದ್ಯಾಪಕರಾದ ಡಾ ಭವ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಡಾ ಭವ್ಯ ಸ್ವಾಗತಿಸಿ, ಡಾ. ಸುನೀತಾ ವಂದಿಸಿದರು. ಡಾ. ಜಾನ್ವಿ ಕಾರ್ಯಕ್ರಮ ನಿರೂಪಿಸಿದರು.