ಅಡ್ಕಾರು: ಅಂಜನಾದ್ರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾ ಮಹೋತ್ಸವವು ಫೆಬ್ರವರಿ ತಿಂಗಳಾಂತ್ಯದಲ್ಲಿ ಜರುಗಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಆಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಜ.25ರಂದು ರಾತ್ರಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಪುರೋಹಿತ ನಾಗರಾಜ ಭಟ್, ಆಡಳಿತ ಸಮಿತಿ ಅಧ್ಯಕ್ಷ ಶಿವರಾಮ ರೈ ಕುರಿಯ ಸೇರಿದಂತೆ ಆಡಳಿತ ಸಮಿತಿ ಪದಾಧಿಕಾರಿಗಳು, ಸೇವಾ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಭಜನಾ ಸಮಿತಿ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.