ಜಾಲ್ಸೂರು – ಅಡ್ಕಾರು ಸ.ಹಿ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಅಡ್ಕಾರಿನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.26ರಂದು ಆಚರಿಸಲಾಯಿತು.

ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಗಣೇಶ್ ಅಂಬಾಡಿಮೂಲೆ ಅವರು ಧ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರಾದ ಶ್ರೀಮತಿ ಕವಿತ, ಜಿ., ಸತೀಶ್ , ಮಹಮ್ಮದ್ ನೌಫಲ್, ಶಾಲಾ ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಲತೀಫ್ ಅಡ್ಕಾರು ಉಪಸ್ಥಿತರಿದ್ದರು.


ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಣರಾಜ್ಯೋತ್ಸವ ದಿನದ ಮಹತ್ವ ತಿಳಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಲಾಯಿತು.

ಬಳಿಕ ನಡೆದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಸಂತಿ ಎಂ. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಶ್ರೀಮತಿ ಚಂದ್ರಾವತಿ ವಂದಿಸಿದರು. ಶಾಲಾ ಸಹಶಿಕ್ಷಕಿ ಕಾವ್ಯಶ್ರೀ ಎಸ್. ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಿದ್ಯಾರ್ಥಿಗಳು, ಸಹಶಿಕ್ಷಕವೃಂದದವರು ಹಾಗೂ ಪೋಷಕರು ಉಪಸ್ಥಿತರಿದ್ದರು.