ಕರ್ನಾಟಕದ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕು.ಆರಾಧ್ಯ ಎಲ್. ರೈ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಮಿತ್ತಡ್ಕದ ರೋಟರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ೭ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆರಾಧ್ಯ ಆಲೆಟ್ಟಿ ಗ್ರಾಮದ ಬಡ್ಡಡ್ಕ ಶ್ರೀಮತಿ ಜಲಜಾಕ್ಷಿ ಎಲ್. ರೈ ಮತ್ತು ಲೋಕೇಶ್ ರೈ ಎ. ದಂಪತಿಗಳ ಪುತ್ರಿ.
ಗಾನನೃತ್ಯ ಅಕಾಡೆಮಿ ಮಂಗಳೂರು ಇದರ ಸುಳ್ಯ ಶಾಖೆಯಲ್ಲಿ ವಿದುಷಿ ವಿದ್ಯಾಶ್ರೀ ರಾಧಾಕೃಷ್ಣ ಮತ್ತು ವಿದುಷಿ ಮಂಜುಶ್ರೀ ರಾಘವ್ ಇವರಿಂದ ಭರತನಾಟ್ಯ ಅಭ್ಯಸಿಸುತ್ತಿದ್ದಾರೆ.